ವಿಭಾಗಗಳು

ಸುದ್ದಿಪತ್ರ

Your email:

 

Archive for 2007

ಮೇರಾ ಹೋ ಮನ್ ಸ್ವದೇಶಿ….

Friday, December 7th, 2007

ಸ್ವದೇಶಿ ಎನ್ನುವುದು ಸಂಕುಚಿತ ಭಾವನೆ ಅಂತ ಕೆಲವರು ವಾದ ಹೂಡೋದನ್ನ ನಾನು ಕೇಳಿದ್ದೇನೆ. ಖಂಡಿತ ಅದು ತಪ್ಪು. ಸ್ವದೇಶೀಯತೆ ಕೇವಲ ಭಾವನೆಗೆ ಸೀಮಿತವಲ್ಲ. ಅದೊಂದು ವ್ಯವಸ್ಥೆ. ’ಸ್ವದೇಶಿ’ ಅಂದರೆ ವಿಶ್ವವೆಲ್ಲವೂ ಒಂದಾಗಿ ಸಂತೋಷದಿಂದ ಇರಬೇಕೆನ್ನುವ ವಿಶ್ವ ಮಾನವ ಧರ್ಮದ ವಿಕೇಂದ್ರೀಕೃತ ರೂಪ.

ಈ ವಿಶ್ವ ಮಾನವ ಧರ್ಮದ ಮೊದಲ ಹೆಜ್ಜೆ ಸ್ವಾರ್ಥ. ಇಲ್ಲಿ ಸ್ವಾರ್ಥ ಅಂದರೆ ತಮ್ಮ ತಮ್ಮ ಅಗತ್ಯಗಳನ್ನು ಪೂರೈಸಿಕೊಂಡು ಸ್ವಾವಲಂಬಿಗಳಾಗುವುದು ಅನ್ನುವ ವಿಸ್ತೃತಾರ್ಥವಿದೆ. ಇದು ಮೊದಲು ವೈಯಕ್ತಿಕ, ನಂತರ ಕುಟುಂಬ, ಆ ಮೂಲಕ ರಾಷ್ಟ್ರದ ಸ್ವಾರ್ಥವಾಗಿ [...]

ಕಂಡವರ ದುಡ್ಡಿಗೆ, ಜೀವಕ್ಕೆ ಬೆಲೆಯೇ ಇಲ್ವಾ?

Saturday, December 1st, 2007

ಇವತ್ತಿನ ಸುದ್ದಿ ಕೇಳಿದಿರಾ?
ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಏಯ್ಡ್ಸ್ ರೋಗಿಗಳಿಗೆ ಕೊಡುವ ಔಷಧದಲ್ಲಿ ಹೇರಾಫೇರಿ ನಡೆಯುತ್ತಿದೆ. ವಿದೇಶೀ ಔಷಧ ಕಂಪೆನಿಗಳ ಎಕ್ಸ್ ಪೆರಿಮೆಂಟಿಗೆ ನಮ್ಮ ಜನರು ಬಲಿಪಶುಗಳಾಗ್ತಿದಾರೆ.
ಮೊನ್ನೆ ’ಔಷಧ ಮಾರುಕಟ್ಟೆಯಲ್ಲಿ ಬಿಕರಿಯಾಗುವ ಜೀವಗಳು’ ಲೇಖನವನ್ನೋದಿದ ಕೆಲವು ಪರಿಚಿತರು, “ನೀವು ಹೇಳುವಷ್ಟೆಲ್ಲ ಕುಲಗೆಟ್ಟುಹೋಗಿಲ್ಲ ಬಿಡ್ರಿ! ಸುಮ್ನೆ ಎಲ್ಲಾವ್ದನ್ನೂ ಎಕ್ಸಾಸಿರೇಟ್ ಮಾಡ್ತೀರ” ಅಂದುಬಿಟ್ಟಿದ್ದರು. ಆಗ ನಾನು ತೀರ ನನ್ನ ಸುತ್ತ ಮುತ್ತಲೇ ನಡೆದ ಕೆಲವು ಘಟನೆಗಳನ್ನ ಹೇಳಿ ವಿಷಯದ ಗಂಭೀರತೆಯನ್ನ ಮನದಟ್ಟು ಮಾಡಿಸಬೇಕಾಯ್ತು. ಮತ್ತಿವತ್ತು ಬಂದಿದೆ ಈ ಆಘಾತಕಾರಿ ಸುದ್ದಿ.
ಖಾಸಗಿ ವೈದ್ಯರದೊಂದು ರೀತಿಯ [...]

ಔಷಧ ಮಾರುಕಟ್ಟೆಯಲ್ಲಿ ಬಿಕರಿಯಾಗುವ ಜೀವಗಳು…

Sunday, November 25th, 2007

                                                 
ವೈದ್ಯಕೀಯ ಜಗತ್ತು ಇತ್ತೀಚೆಗೆ ಅತ್ಯಂತ ದುಬಾರಿ ಜಗತ್ತಾಗಿದೆ ಅಂತ ಅನ್ನಿಸ್ತಿಲ್ವಾ? ಕೈಕಾಲು ಮುರಿದುಕೊಂಡೋ, ಎದೆ ನೋವು ಅಂತಲೋ, ಕಣ್ಣು ನೋವು ಅಂತಲೋ ಆಸ್ಪತ್ರೆಗೆ ಹೋಗಿ ನೋಡಿ, ಹತ್ತಿಪ್ಪತ್ತು ಸಾವಿರದ ಕಮ್ಮಿ ಕೈಬಿಡದೆ ನೀವು ಹೊರಗೆ ಬಂದರೆ ಆಮೇಲೆ ಹೇಳಿ!  ಹೋಗಲಿ, ಇಷ್ಟಾದರೂ ನಮ್ಮ ಸಮಸ್ಯೆ ಬಗೆ ಹರಿದಿರುತ್ತಾ? ಹೊಟ್ಟೆ ನೋವು ಅಂತ ಹೋದವರು ಅಪೆಂಡಿಸೈಟಿಸ್ಸನ್ನೋ, ಹರ್ನಿಯಾವನ್ನೋ ಹೊತ್ತು ತಂದಿರುತ್ತಾರೆ. ಇನ್ನು ದೊಡ್ಡ ದೊಡ್ಡ ಖಾಯಿಲೆಗಳ ಹೆಸರನ್ನೇ ಹೇಳಿಕೊಂಡು ಒಳಹೊಕ್ಕವರ ಪಾಡು ಕೇಳುವುದಂತೂ ಬೇಡ! ಆದರೆ ಕೆಲವು [...]

ನಲುಗುತ್ತಿದೆ ಭಾರತ

Sunday, November 11th, 2007

ಬಲು ಹಳೆಯ ಕತೆ. ಒಬ್ಬ ಕುರುಡ ಮತ್ತೊಬ್ಬ ಕುಂಟನ ಕತೆ. ಒಮ್ಮೆ ಇಬ್ಬರೂ ನಿರ್ಧಾರ ಮಾಡುತ್ತಾರೆ. ಕುರುಡ ಕುಂಟನನ್ನು ಹೆಗಲ ಮೆಲೆ ಕೂರಿಸಿಕೊಳ್ಳುತ್ತಾನೆ. ಕುಂಟ ದಾರಿ ತೋರುತ್ತಾನೆ, ಕುರುಡ ದಾರಿ ಸವೆಸುತ್ತಾನೆ. ಮನೆ ಮನೆಗೆ ಹೋಗಿ ಭಿಕ್ಷೆ ಬೇಡಿ ಇಬ್ಬರೂ ಹೊಟ್ಟೆ ತುಂಬಿಸಿಕೊಳ್ಳತೊಡಗುತ್ತಾರೆ. ಇದೆಲ್ಲ ಮೊದ ಮೊದಲು ಚೆನ್ನಾಗಿಯೇ ನಡೆದಿತ್ತು. ಬರಬರುತ್ತಾ ಕುಂಟ ಸ್ವಾರ್ಥಿಯಾಗತೊಡಗಿದ. ಭಿಕ್ಷೆಯಲ್ಲಿ ದೊರೆತ ಒಳ್ಳೆಯ ಪದಾರ್ಥಗಳನ್ನು ತಾನು ತಿಂದು, ಹಳಸಿದ, ಅಯೋಗ್ಯ ಆಹಾರವನ್ನು ಕುರುಡನಿಗೆ ಕೊಡತೊಡಗಿದ. ಹೇಗೂ ಕಣ್ಣು ಕಾಣದಲ್ಲ!? ಇತ್ತ ಕುಂಟ ಚೆನ್ನಾಗಿ [...]

ಹೀಗೊಂದು ಹಸಿವಿನ ಕಥೆ…

Thursday, November 8th, 2007

ಮನೆ ಹೊರಗೆ ಇಣುಕಿದರೆ ಕಾಣೋದು ಭಣ ಭಣ ನೆಲ.
ಒಳಗೂ ಸುಡು ಹಬೆ. ಮಳೆ ಹನಿ ಕಂಡು ನಾಲ್ಕು ವರ್ಷವಾದರೂ ದಾಟಿತ್ತು. ಊರಿನ ಎಲ್ಲರೂ ಈಗ ಚಾತಕ ಪಕ್ಷಿಗಳು.
ಮೊದಲು ಮನೆಯೊಡೆಯ ಮನೆ ಬಿಟ್ಟು ಹೊರಟ. ಪಟ್ಟಣದಲ್ಲಿ ದುಡಿದರೆ ನಾಲ್ಕು ಕಾಸು ಸಂಪಾದಿಸಿ ಮನೆಗೂ ಕಳಿಸಬಹುದು ಅಂತ!
ಆರೇ ತಿಂಗಳು. ಪಟ್ಟಣದ ಅಬ್ಬರದಿಂದ ಕಂಗೆಟ್ಟ. ವಾಪಸು ಬಂದರೆ ಕಿತ್ತು ತಿನ್ನುವ ಮನೆ.
ರೈಲು ಕಂಬಿಯ ಮೇಲೆ ಅಂಗಾತ ಬಿದ್ದ. ಪೋಲೀಸರು ಮಹಜರು ಮಾಡುವ ಗೋಜಿಗೂ ಹೋಗಲಿಲ್ಲ.
* * *
ಗಂಡನ ಶ್ರಮದ ಫಲಕ್ಕೆ ಕಾಯುತ್ತ [...]