ಮೇರಾ ಹೋ ಮನ್ ಸ್ವದೇಶಿ….
Friday, December 7th, 2007ಸ್ವದೇಶಿ ಎನ್ನುವುದು ಸಂಕುಚಿತ ಭಾವನೆ ಅಂತ ಕೆಲವರು ವಾದ ಹೂಡೋದನ್ನ ನಾನು ಕೇಳಿದ್ದೇನೆ. ಖಂಡಿತ ಅದು ತಪ್ಪು. ಸ್ವದೇಶೀಯತೆ ಕೇವಲ ಭಾವನೆಗೆ ಸೀಮಿತವಲ್ಲ. ಅದೊಂದು ವ್ಯವಸ್ಥೆ. ’ಸ್ವದೇಶಿ’ ಅಂದರೆ ವಿಶ್ವವೆಲ್ಲವೂ ಒಂದಾಗಿ ಸಂತೋಷದಿಂದ ಇರಬೇಕೆನ್ನುವ ವಿಶ್ವ ಮಾನವ ಧರ್ಮದ ವಿಕೇಂದ್ರೀಕೃತ ರೂಪ. ಈ ವಿಶ್ವ ಮಾನವ ಧರ್ಮದ ಮೊದಲ ಹೆಜ್ಜೆ ಸ್ವಾರ್ಥ. ಇಲ್ಲಿ ಸ್ವಾರ್ಥ ಅಂದರೆ ತಮ್ಮ ತಮ್ಮ ಅಗತ್ಯಗಳನ್ನು ಪೂರೈಸಿಕೊಂಡು ಸ್ವಾವಲಂಬಿಗಳಾಗುವುದು ಅನ್ನುವ ವಿಸ್ತೃತಾರ್ಥವಿದೆ. ಇದು ಮೊದಲು ವೈಯಕ್ತಿಕ, ನಂತರ ಕುಟುಂಬ, ಆ ಮೂಲಕ ರಾಷ್ಟ್ರದ […]