ವಿಭಾಗಗಳು

ಸುದ್ದಿಪತ್ರ

Your email:

 

Archive for 2008

ಸಾಂಸ್ಕೃತಿಕ ಆಕ್ರಮಣಗಳು ಮತ್ತು ಪರಿಣಾಮಗಳು

Tuesday, December 23rd, 2008

ರಾಷ್ಟ್ರವೆಂದರೇನು?
ಬರಿಯ ಕಲ್ಲು – ಮಣ್ಣೇ? ನಾವು ಕಟ್ಟಿ ನಿಲ್ಲಿರುವ ಕಟ್ಟಡಗಳೇ? ಹರಿಯುವ ನದಿಯೇ? ಎದೆಯೆತ್ತಿ ನಿಂತಿರುವ ಪರ್ವತ ಸಮೂಹಗಳೇ? ಅಲ್ಲಿ ಜನಿಸಿರುವ ಮಹಾಪುರುಷರೇ? ಅಥವಾ ಅವರು ಬರೆದಿರುವ ಗ್ರಂಥಗಳೇ?
ಊಹೂಂ… ಉತ್ತರ ಅಷ್ಟು ಸುಲಭವೇನಲ್ಲ. ಬಹಳ ಬಾರಿ ರಾಷ್ಟ್ರವೆಂದೊಡನೆ ನಾವು ಇಂಥ ವಿಷಯಗಳ ಸುತ್ತಲೇ ಅಡ್ಡಾಡುತ್ತಿರುತ್ತೇವೆ. ವಾಸ್ತವವಾಗಿ, ರಾಷ್ಟ್ರ ಸಂಸ್ಕೃತಿಯ ಪ್ರವಾಹ. ಸಂಸ್ಕೃತಿ ಇವುಗಳೆಲ್ಲವನ್ನೂ ಒಳಗೊಂಡಂತಹ, ಇವುಗಳನ್ನೂ ಮೀರಿದಂತಹ ಅಂಶ.
ರಾಷ್ಟ್ರಕವಿ ಕುವೆಂಪು ಇದನ್ನು ಸಮರ್ಥವಾಗಿ ಚಿತ್ರಿಸುತ್ತಾರೆ. ಮಾನವನನ್ನು ದೃಷ್ಟಿಯಲ್ಲಿರಿಸಿಕೊಂಡು ಅವರು ಪ್ರಗತಿಯ ಬಗೆಗಳನ್ನು ವಿವರಿಸುತ್ತಾರೆ.  ಮಾನವನ ಆಂತರಿಕ ಬೆಳವಣಿಗೆಯನ್ನು [...]

ಬುಡವೇ ಭದ್ರವಿಲ್ಲದ ಮೇಲೆ ಕಟ್ಟಡ ಮಜಬೂತಾಗುವುದು ಹೇಗೆ?

Wednesday, December 3rd, 2008

( ‘ನೆಹರೂ ಪರದೆ ಸರಿಯಿತು’ ಪುಸ್ತಕದಿಂದ ಆಯ್ದ ಭಾಗ)
ಥೂ! ಗಾಂಧೀಜಿ ಹೇಳ್ತಾರಲ್ಲ , ಗ್ರಾಮ ಸ್ವರಾಜ್ಯ-ಸ್ವದೇಶೀ … ಇವೆಲ್ಲ  ಯೋಚಿಸಲಿಕ್ಕೂ  ಅನರ್ಹವಾದವು’ ಹೀಗೆನ್ನುತ್ತಿದ್ದವರು ಯಾರಿರಬಹುದು ಹೇಳಿ? ಸಾವರ್ಕರಾ? ಅಂಬೇಡ್ಕರಾ? ಜಿನ್ನಾನಾ? ಪಟೇಲರಾ? ಖಂಡಿತಾ ಅಲ್ಲ, ಹಾಗೆನ್ನುತ್ತಿದ್ದವರು, ಸ್ವತಃ ಗಾಂಧೀಜಿಯವರ ಅನುಯಾಯಿ ನೆಹರೂ!
ಯಾರನ್ನು  ಗಾಂಧೀಜಿ ‘ನನ್ನ  ನಂತರ ನನ್ನ  ಮಾತನಾಡುವವ’ ಎಂದು ಕರೆಯುತ್ತಿದ್ದರೋ ಅದೇ ವ್ಯಕ್ತಿ. ಯಾರನ್ನು  ಇಡಿಯ ದೇಶ ಗಾಂಧೀಜಿಯ ಚಿಂತನೆಗಳ ಶಾಶ್ವತ ರೂಪ ಎಂದು ಭಾವಿಸುತ್ತಿದ್ದರೋ ಆತ. ಹೌದು ಅದೇ ನೆಹರೂ ಸ್ವದೇಶಿ ಚಿಂತನೆ ನಡೆಸಿದರೆ [...]

ಭಯೋತ್ಪಾದನಾ ನಿಗ್ರಹ- ಕೆಲವು ವೈಫಲ್ಯಗಳು

Monday, December 1st, 2008

ಮತ್ತೊಂದು ಮಾಯದ ಗಾಯ!
ಸುಖಾಂತ್ಯವಾಯ್ತೆಂದು ಬೀಗಿದ್ದಷ್ಟೆ ಬಂತು. ಸತ್ಯ ಹೇಳಿ. ಒಂಭತ್ತು ಉಗ್ರಗಾಮಿಗಳನ್ನು ಕೊಲ್ಲಲು ೬೨ ಗಂಟೆಗಳಷ್ಟು ದೀರ್ಘ ಕಾಲ ಸವೆಸಿದ್ದನ್ನು (ಅದೂ ಭಾರತದ ಪ್ರಮುಖ ನಗರಿ ಮುಂಬಯ್ ನೊಳಗೆ) ಯಾರಾದರೂ ಹೆಮ್ಮೆಯಿಂದ ಹೇಳಿಕೊಳ್ಳಬಹುದೇನು?
ಧಿಕ್ಕಾರವಿರಲಿ ಸರ್ಕಾರಗಳಿಗೆ!
ಧಿಕ್ಕಾರವಿರಲಿ ನಮ್ಮ ರಕ್ಷಣಾ ಪಡೆಗಳಿಗೆ!!
ಮೊದಲನೆಯದೇನೋ ಸರಿ. ಈ ಎರಡನೆಯದೇಕೆ ಎನ್ನುವಿರೇನೋ?
ಹೌದು. ಆ ಸಾಲು ಬರೆಯಬೇಕಾದರೆ ನನಗೂ ವಿಪರೀತ ನೋವಿದೆ. ಆದರೆ ಬರೆಯದೇ ವಿಧಿಯಿಲ್ಲ. ಕಾದಾಟದಲ್ಲಿ ಸತ್ತವರಿಗೆ ಶ್ರದ್ಧಾಂಜಲಿ ಅರ್ಪಿಸುವ ಭರದಲ್ಲಿ ಆದದ್ದನ್ನು ಮರೆತುಬಿಟ್ಟರೆ… ಮುಂದಿನ ವರ್ಷ ಮತ್ತೊಂದಷ್ಟು ಜನರಿಗೆ ಶ್ರದ್ಧಾಂಜಲಿ ಅರ್ಪಿಸಬೇಕಾದೀತು.
ನಮ್ಮ ಪೋಲಿಸ್ [...]

ಅಮೆರಿಕನ್ನರಿಂದ ಪಾಠ ಕಲಿಯಲಿದು ಸಕಾಲ…

Friday, November 28th, 2008

ಮನಸ್ಸೇನೋ ಕುದಿಯುತ್ತಿದೆ. ಆದರೇನು? ಸ್ವಲ್ಪ ಕಾಲ ಸುಮ್ಮನಿರೋಣ. ಅದು ಅಮೆರಿಕ ಕಲಿಸಿದ ಪಾಠ. ವಿಶ್ವ ವ್ಯಾಪಾರಕೇಂದ್ರ ಕಟ್ಟಡಗಳು ಉರುಳಿಬಿದ್ದಾಗ ಅಮೆರಿಕನ್ನರು ಅಧ್ಯಕ್ಷರ ಮೇಲೆ ಎದುರಾಡಾಲಿಲ್ಲ. ಸುಮ್ಮನಿದ್ದರು. ಆಫ್ಘಾನಿಸ್ಥಾನದ ಮೇಲೆ ಮುಗಿಬಿದ್ದರು. ತಮ್ಮ ದೇಶದಲ್ಲಿ ಕಳಕೊಂಡ ಒಂದೊಂದು ಜೀವದ ಲೆಕ್ಕ ಚುಕ್ತಾ ಮಾಡಿದರು. ಇಷ್ಟಕ್ಕೂ ನಾವೀಗ ನೇರ ಆಕ್ರಮಣವನ್ನೇನೂ ಮಾಡಬೇಕಿಲ್ಲ. ಪಾಕಿಸ್ಥಾನದ ಮೇಲೆ ಆರ್ಥಿಕ ದಿಗ್ಬಂಧನ ಹೇರಿದರೂ ಸಾಕು. ಅದರೊಂದಿಗೆ ಸಂಬಂಧ ಹೊಂದಿರುವ ದೇಶಗಳತ್ತ ಮುನಿಸಿ ಕುಂತರೂ ಸಾಕು. ಅಂದುಕೊಂಡಿದ್ದಕ್ಕಿಂತ ಹೆಚ್ಚಿನ ಆಘಾತವನ್ನೇ ನೀಡಿದಂತಾಗುತ್ತದೆ.
ಭಾರತದ ಹಿಂದಿನ ವೈಭವವನ್ನು ಹೇಳಿ- [...]

ಮುಂದೇನು ಮಾಡಬಹುದು?

Wednesday, November 19th, 2008

ಶ್ವೇತಾಳ ಸಮಸ್ಯೆಗೆ ಸ್ಪಂದಿಸಿದ ಎಲ್ಲರಿಗೂ ಧನ್ಯವಾದ.
ಬೇಸರದ ಸಂಗತಿಯೆಂದರೆ, ಹಾಗೆ ಸಧ್ಯಕ್ಕೆ ಹಣ ನೀಡು, ಮುಂದೆ ಹೀಗಾಗದಂತೆ ತಡೆಯಲು ಖಂಡಿತವಾಗಿಯೂ ಪ್ರಯತ್ನ ಪಡುವೆವು ಎಂದು ಹೇಳಿದ ನಂತರ ಆಕೆ ಕರೆ ಮಾಡಲೇ ಇಲ್ಲ. ಬಹಳ ನಿರಾಸೆಯಾಗಿರಬೇಕು. ಪ್ರತಿರೋಧ, ಹೋರಾಟಗಳು ತತ್ ಕ್ಷಣದ ಪ್ರಕ್ರಿಯೆ ಆಗಿಬಿಟ್ಟರೆ ಅದರಲ್ಲಿ ಜೋಶ್ ಏನೋ ಇರುವುದು.. ಆದರೆ ಅದು ದೀರ್ಘಕಾಲಿಕ ಪರಿಣಾಮ ಉಳಿಸುವುದು ಕಷ್ಟವೇ.
ಈಗ ನಾನಂತೂ ಸುಮ್ಮನೆ ಕುಳಿತುಕೊಳ್ಳುವವನಲ್ಲ. ಆದರೆ ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಕೇವಲ ಒಬ್ಬ ಶಿಕ್ಷಕನ ವಿರುದ್ಧ ಹೋರಾಡಲೂ ನನಗೆ ಮನಸಿಲ್ಲ. [...]

ಶ್ವೇತಾಳಿಗೆ ಏನುತ್ತರಿಸಲಿ ಹೇಳಿ ಪ್ಲೀಸ್…

Thursday, November 13th, 2008

ಮೊನ್ನೆ ಮಧ್ಯಾಹ್ನ ಎರಡು ಗಂಟೆಗೆ ಬನಶಂಕರಿಯ ಡಿಪ್ಲೊಮಾ ಕಾಲೇಜೊಂದರಲ್ಲಿ ಓದುತ್ತಿರುವ ಶ್ವೇತಾ ಕರೆ ಮಾಡಿದ್ದಳು. ‘ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡೋದು ಹೇಗೆ ಸಾರ್?” ಎಂದಳು. ನಾನು ಎಂದಿನಂತೆ, “ಮೊದಲು ನಾವು ಶುದ್ಧವಾಗೋಣ. ನಮ್ಮ ಕೈಯಿಂದ ಅಚಾತುರ್ಯ ನಡೆಯದಿದ್ದರಾಯ್ತು” ಎಂದೆ. ಅದರರ್ಥ, ಲಂಚ ತೊಗೋಳೋದೂ ತಪ್ಪು, ಕೊಡೋದೂ ತಪ್ಪು.
ಇಷ್ಟಾದ ಮೇಲೆ ಆ ಹುಡುಗಿ ಹೇಳಿದ ಘಟನೆ ನನ್ನನ್ನ ವಿಷಾದಕ್ಕೆ ನೂಕಿತು. ಅವತ್ತು ಬೆಳಗ್ಗೆ ಆಕೆಗೆ ಪ್ರ್ಯಾಕ್ಟಿಕಲ್ ಎಗ್ಸಾಮ್ ಇತ್ತಂತೆ. ಅದನ್ನು ‘ಟೈಮಿಂಗ್’ ಅಂತ ಕರೀತಾರೆ. ನಿಗದಿತ ಸಮಯದಲ್ಲಿ ಮಾಡಿ [...]

ಪ್ರಾಣಕ್ಕಿಂತ ಮಾನ ದೊಡ್ಡದೆಂದ ಅವರು ಏನು ಮಾಡಿದರು ಗೊತ್ತಾ?

Friday, September 26th, 2008

ಅಲ್ಲಾವುದ್ದಿನ್ ಖಿಲ್ಜಿ ಮೇವಾಡದ ಗಡಿಗೆ ಸೈನ್ಯ ಸಮೇತ ಬಂದುಬಿಟ್ಟ. ತಾನು ಬರುವ ಸುದ್ದಿ ರಜಪೂತ ದೊರೆ ಭೀಮ ದೇವ ಸಿಂಹನಿಗೆ ತಿಳಿಯದಿರಲೆಂದು ಸಾಕಷ್ಟು ಪಾಡುಪಟ್ಟ. ಸಾಧ್ಯವಾಗಲಿಲ್ಲ. ರಾಜನಿಗೆ ಗೂಡಚಾರರು ಸುದ್ದಿ ಮುಟ್ಟಿಸಿದರು. ಭೀಮದೇವ ಸರ್ವ ಸನ್ನದ್ಧನಾದ. ಅಲ್ಲಾವುದ್ದಿನ್ ಹೆಜ್ಜೆ ಇಡುವ ಮುನ್ನವೇ ಮುಗಿಬೀಳಲು ಯೋಜನೆ ಹಾಕಿದ.
ಯುದ್ಧವೆಂದರೇನೇ ಕಳೆಗಟ್ಟುವ ಕುಲ ರಜಪೂತರದು. ಕದನವೇ ಇಲ್ಲದೆ ಒರೆಯೊಳಗಿಟ್ಟಿದ್ದ ಕತ್ತಿಯನ್ನು ಹೊರಗೆಳದರು ಸೈನಿಕರು. ರಣೋತ್ಸಾಹ ಮೈಮೇಲೇರಿತು.
ಇತ್ತ ಖಿಲ್ಜಿ ಹಗಲಿರುಳು ಪದ್ಮಿನಿ… ಪದ್ಮಿನಿ ಎನ್ನುತ್ತ ಮೈಮರೆತಿದ್ದ. ಭುವನದೊಳಗಿನ ಅಪ್ರತಿಮ ಸುಂದರಿ ಪದ್ಮಿನಿಯನ್ನು ಭೋಗಿಸಬೇಕೆನ್ನುವ [...]

ವಿವೇಕಾನಂದನೆಂಬ ವೀರ ಸಂನ್ಯಾಸಿ

Friday, September 19th, 2008

ಸೆಪ್ಟೆಂಬರ್ ಹನ್ನೊಂದು ಅಂತಾದರೂ ಕರೆಯಿರಿ, ೯/೧೧ ಅಂತಾದರೂ ಹೇಳಿ. ಮನಸ್ಸು ಅಮೆರಿಕಾದತ್ತ ಧಾವಿಸಿಬಿಡುತ್ತದೆ. ವಿಶ್ವ ವ್ಯಾಪರ ಕೇಂದ್ರದ ಎರಡು ಕಟ್ಟಡಗಳನ್ನು ಭಯೋತ್ಪಾದಕರು ಉರುಳಿಸಿದ್ದು ಕಣ್ಮುಂದೆ ಅಲೆಅಲೆಯಾಗಿ ತೇಲಿ ಹೋಗುತ್ತದೆ. ಅಲ್ಲದೆ ಮತ್ತೇನು? ಉರುಳುವ ಕಟ್ಟಡಗಳನ್ನು ಟಿವಿಯ ಮುಂದೆ ಕುಳಿತು ನೇರ ಪ್ರಸಾರದಲ್ಲಿ ನೋಡಿದವರಲ್ಲವೆ ನಾವು!?
ಆದರೆ ಈ ಅಮೆರಿಕಾ ಸೆಪ್ಟೆಂಬರ್ ಹನ್ನೊಂದರಂದೇ ಇನ್ನೊಂದು ಸಾತ್ತ್ವಿಕ ಸುನಾಮಿಗೆ ಸಿಲುಕಿ ಅಲುಗಾಡಿದ್ದು ಬಹುತೆಕರಿಗೆ ಮರೆತೇಹೋಗಿದೆ. ಅವತ್ತು ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ [...]

ಅಣು ಒಪ್ಪಂದದ ಆಜೂ ಬಾಜು- ನಮ್ಮೊಳಗಿನ ಚರ್ಚೆ

Friday, July 25th, 2008

ಅಣು ಒಪ್ಪಂದದ ಕುರಿತಾದ ‘ಅಧಿವೇಶನ’ ಕೊನೆಗೂ ಪ್ರಹಸನವಾಗಿಯೇಬಿಡ್ತು. ಎರಡೂ ದಿನ ಅಣು ಒಪ್ಪಂದದ ಕುರಿತು ಘನವಾದ ಚರ್ಚೆಗಳಾಗುತ್ತದೆಂದು ಭಾವಿಸಿದ್ದವರಿಗೆ ತೀವ್ರ ನಿರಾಶೆ. ಟೀವಿ ಮುಂದೆ ಕುಳಿತು ಕಲಾಪ ವೀಕ್ಷಿಸಿದ್ದವರನ್ನು ಬಿಡಿ, ಸರ್ಕಾರದ ಅನುಮತಿ ಪಡೆದು ಜೈಲಿನಿಂದ ನೇರವಾಗಿ ಬಂದು ಅಧಿವೇಶನದಲ್ಲಿ ಕುಳಿತಿದ್ದ ಎಸ್ ಪಿ ಯ ಸಂಸದ ಕೂಡ ತನಗೆ ‘ಒಪ್ಪಂದ ಏನೆಂದೇ ಅರ್ಥವಾಗಲಿಲ್ಲ’ ಎಂದಿದ್ದು ಹಾಸ್ಯಾಸ್ಪದವೇನಲ್ಲ.
ಜವಾಬ್ದಾರಿಯುತವಾಗಿ ಮಾತಾಡಬೇಕಿದ್ದ ಪ್ರಧಾನ ಮಂತ್ರಿ, ರಕ್ಷಣಾ ಮಂತ್ರಿಗಳು ಯುಪಿಎ ಯ ಸಾಧನೆ ಹೇಳಲು ಸಮಯ ವ್ಯಯ ಮಾಡಿದರೆ, ಪ್ರತಿಪಕ್ಷದ ನಾಯಕರು [...]

ಕ್ರಿಸ್ತ ಮತ್ತು ಭಾರತ- ಎರಡು ಅನುಮಾನಗಳು

Friday, May 23rd, 2008

ಟೀನಾ ಮತ್ತು ನೀಲಾಂಜನರು ‘ಕ್ರಿಸ್ತ ಮತ್ತು ಭಾರತ’ ಲೇಖನಕ್ಕೆ ಪ್ರತಿಕ್ರಿಯಿಸಿ ಚರ್ಚೆಗೆ ಅವಕಾಶ ಮಾಡಿಕೊಟ್ಟಿದ್ದಾರೆ.
ಪತ್ರಿಕೆಯಲ್ಲಿ ನಾನು ಬರೆದಿರೋದು ಏಸುಕ್ರಿಸ್ತನ ಬಗ್ಗೆ ನಡೆದ ಸಂಶೋಧನೆಯ ಕೇವಲ ಒಂದು ಭಾಗವಷ್ಟೇ. ಇದು ಪತ್ರಿಕೆಯ ಓದುಗರಿಂದಲೂ ಸಾಕಷ್ಟು ಉದ್ಗಾರ ಹೊರಡಿಸಿದೆ. ಆದರೆ ಇನ್ನೂ ಹೇಳಬೇಕಿರುವ ವಿಷಯಗಳು ಮತ್ತೆಷ್ಟು ಸಂಚಲನ ಉಂಟುಮಾಡಬಹುದೆಂದು ಯೋಚಿಸುತ್ತಿದ್ದೇನೆ.
ಇರಲಿ. ಗೆಳತಿ ಟೀನಾ ಹೇಳಿದ ಮೃತ ‘ಸಮುದ್ರದ ದಾಸ್ತಾವೆಜುಗಳು’ ಒಂದು ಕಾಲದಲ್ಲಿ ಜಗತ್ತನ್ನು ಅಲ್ಲಾಡಿಸಿದಂಥವು. ಅವುಗಳನ್ನಷ್ಟೆ ಆಧಾರವಾಗಿಟ್ಟುಕೊಂಡು ಅಧ್ಯಯನಕ್ಕೆ ಕುಳಿತರೆ ಏಸು ಎಂಬ ವ್ಯಕ್ತಿ ಅವತಾರವೆತ್ತಿದ್ದೇ ಸುಳ್ಳು ಎಂದಾಗುತ್ತದೆ. ಈ [...]