ಅಣು ಒಪ್ಪಂದದ ಆಜೂ ಬಾಜು- ನಮ್ಮೊಳಗಿನ ಚರ್ಚೆ
Friday, July 25th, 2008ಅಣು ಒಪ್ಪಂದದ ಕುರಿತಾದ ‘ಅಧಿವೇಶನ’ ಕೊನೆಗೂ ಪ್ರಹಸನವಾಗಿಯೇಬಿಡ್ತು. ಎರಡೂ ದಿನ ಅಣು ಒಪ್ಪಂದದ ಕುರಿತು ಘನವಾದ ಚರ್ಚೆಗಳಾಗುತ್ತದೆಂದು ಭಾವಿಸಿದ್ದವರಿಗೆ ತೀವ್ರ ನಿರಾಶೆ. ಟೀವಿ ಮುಂದೆ ಕುಳಿತು ಕಲಾಪ ವೀಕ್ಷಿಸಿದ್ದವರನ್ನು ಬಿಡಿ, ಸರ್ಕಾರದ ಅನುಮತಿ ಪಡೆದು ಜೈಲಿನಿಂದ ನೇರವಾಗಿ ಬಂದು ಅಧಿವೇಶನದಲ್ಲಿ ಕುಳಿತಿದ್ದ ಎಸ್ ಪಿ ಯ ಸಂಸದ ಕೂಡ ತನಗೆ ‘ಒಪ್ಪಂದ ಏನೆಂದೇ ಅರ್ಥವಾಗಲಿಲ್ಲ’ ಎಂದಿದ್ದು ಹಾಸ್ಯಾಸ್ಪದವೇನಲ್ಲ.
ಜವಾಬ್ದಾರಿಯುತವಾಗಿ ಮಾತಾಡಬೇಕಿದ್ದ ಪ್ರಧಾನ ಮಂತ್ರಿ, ರಕ್ಷಣಾ ಮಂತ್ರಿಗಳು ಯುಪಿಎ ಯ ಸಾಧನೆ ಹೇಳಲು ಸಮಯ ವ್ಯಯ ಮಾಡಿದರೆ, ಪ್ರತಿಪಕ್ಷದ ನಾಯಕರು [...]