ವಿಭಾಗಗಳು

ಸುದ್ದಿಪತ್ರ


 

ಪ್ರಾಣಕ್ಕಿಂತ ಮಾನ ದೊಡ್ಡದೆಂದ ಅವರು ಏನು ಮಾಡಿದರು ಗೊತ್ತಾ?

Friday, September 26th, 2008

ಅಲ್ಲಾವುದ್ದಿನ್ ಖಿಲ್ಜಿ ಮೇವಾಡದ ಗಡಿಗೆ ಸೈನ್ಯ ಸಮೇತ ಬಂದುಬಿಟ್ಟ. ತಾನು ಬರುವ ಸುದ್ದಿ ರಜಪೂತ ದೊರೆ ಭೀಮ ದೇವ ಸಿಂಹನಿಗೆ ತಿಳಿಯದಿರಲೆಂದು ಸಾಕಷ್ಟು ಪಾಡುಪಟ್ಟ. ಸಾಧ್ಯವಾಗಲಿಲ್ಲ. ರಾಜನಿಗೆ ಗೂಡಚಾರರು ಸುದ್ದಿ ಮುಟ್ಟಿಸಿದರು. ಭೀಮದೇವ ಸರ್ವ ಸನ್ನದ್ಧನಾದ. ಅಲ್ಲಾವುದ್ದಿನ್ ಹೆಜ್ಜೆ ಇಡುವ ಮುನ್ನವೇ ಮುಗಿಬೀಳಲು ಯೋಜನೆ ಹಾಕಿದ. ಯುದ್ಧವೆಂದರೇನೇ ಕಳೆಗಟ್ಟುವ ಕುಲ ರಜಪೂತರದು. ಕದನವೇ ಇಲ್ಲದೆ ಒರೆಯೊಳಗಿಟ್ಟಿದ್ದ ಕತ್ತಿಯನ್ನು ಹೊರಗೆಳದರು ಸೈನಿಕರು. ರಣೋತ್ಸಾಹ ಮೈಮೇಲೇರಿತು. ಇತ್ತ ಖಿಲ್ಜಿ ಹಗಲಿರುಳು ಪದ್ಮಿನಿ… ಪದ್ಮಿನಿ ಎನ್ನುತ್ತ ಮೈಮರೆತಿದ್ದ. ಭುವನದೊಳಗಿನ ಅಪ್ರತಿಮ ಸುಂದರಿ […]

ಹೀಗೊಂದು ಹಸಿವಿನ ಕಥೆ…

Thursday, November 8th, 2007

ಮನೆ ಹೊರಗೆ ಇಣುಕಿದರೆ ಕಾಣೋದು ಭಣ ಭಣ ನೆಲ. ಒಳಗೂ ಸುಡು ಹಬೆ. ಮಳೆ ಹನಿ ಕಂಡು ನಾಲ್ಕು ವರ್ಷವಾದರೂ ದಾಟಿತ್ತು. ಊರಿನ ಎಲ್ಲರೂ ಈಗ ಚಾತಕ ಪಕ್ಷಿಗಳು. ಮೊದಲು ಮನೆಯೊಡೆಯ ಮನೆ ಬಿಟ್ಟು ಹೊರಟ. ಪಟ್ಟಣದಲ್ಲಿ ದುಡಿದರೆ ನಾಲ್ಕು ಕಾಸು ಸಂಪಾದಿಸಿ ಮನೆಗೂ ಕಳಿಸಬಹುದು ಅಂತ! ಆರೇ ತಿಂಗಳು. ಪಟ್ಟಣದ ಅಬ್ಬರದಿಂದ ಕಂಗೆಟ್ಟ. ವಾಪಸು ಬಂದರೆ ಕಿತ್ತು ತಿನ್ನುವ ಮನೆ. ರೈಲು ಕಂಬಿಯ ಮೇಲೆ ಅಂಗಾತ ಬಿದ್ದ. ಪೋಲೀಸರು ಮಹಜರು ಮಾಡುವ ಗೋಜಿಗೂ ಹೋಗಲಿಲ್ಲ. * […]